November 22, 2026

Hampi times

Kannada News Portal from Vijayanagara

ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ರಾಷ್ಟ್ರಪತಿಯವರು ಈ ಪ್ರಮುಖ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.

ನ್ಯಾಯಾಂಗ ಅಧಿಕಾರಿಗಳಾದ ಶ್ರೀಮತಿ ಉಷಾರಾಣಿ, ಕೆ.ಎಸ್. ಭರತ್ ಕುಮಾರ್ ಹಾಗೂ ಎಸ್.ಎಂ. ನೇರಳೆ ವಿ. ಭವಾನಿ ಅವರು ಕರ್ನಾಟಕ ಹೈಕೋರ್ಟ್‌ನ ನೂತನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕೇಂದ್ರ ಕಾನೂನು ಸಚಿವಾಲಯ ಹಾಗೂ ಪಿಐಬಿ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

Please follow and like us:

 

 

 

 

 

 

 

 

 

 

Translate »
[t4b-ticker]