https://youtu.be/NHc6OMSu0K4?si=SI_K4goOPEgwo6h2



ನವದೆಹಲಿ: ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ) ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಸುಚಿಕಾ ತಾರಿಯಾಲ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದಿಸಿದ್ದಾರೆ.

ಏಷ್ಯನ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಎಂಎಂಎ ವಿಭಾಗವನ್ನು ಸೇರ್ಪಡೆಗೊಳಿಸಲಾಗಿದ್ದು, ಈ ಚೊಚ್ಚಲ ಪ್ರವೇಶದಲ್ಲೇ ಸುಚಿಕಾ ಸಾಧಿಸಿದ ಗೆಲುವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ರಾಷ್ಟ್ರಪತಿಗಳು ತಮ್ಮ ಸಾಮಾಜಿಕ ಜಾಲತಾಣ ಸಂದೇಶದಲ್ಲಿ ಶ್ಲಾಘಿಸಿದ್ದಾರೆ.
ಇದೇ ವೇಳೆ, ಪುರುಷರ 10 ಮೀಟರ್ ಏರ್ ರೈಫಲ್ ವೈಯಕ್ತಿಕ ಸ್ಪರ್ಧೆಯ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದ ಹಿಮಾಂಶು ಧಿಲ್ಲೋನ್ ಹಾಗೂ ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡ ರುದ್ರಾಂಕ್ಷ್ ಬಾಲಾಸಾಹೇಬ್ ಪಾಟೀಲ್ ಅವರಿಗೂ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕ್ರೀಡಾಪಟುಗಳ ಏಕಾಗ್ರತೆ, ಬದ್ಧತೆ ಹಾಗೂ ಅತ್ಯುತ್ತಮ ಪ್ರದರ್ಶನವು ಯುವ ಪೀಳಿಗೆಗೆ ಪ್ರೇರಣೆಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂದು ಅವರು ಹಾರೈಸಿದ್ದಾರೆ.


More Stories
ಸೆಪ್ಟೆಂಬರ್ 22 ರಂದು ಭಾರತ ಮತ್ತು ಜಪಾನ್ ನಡುವೆ ಐತಿಹಾಸಿಕ ಏಕೈಕ ಟಿ20 ಪಂದ್ಯ
ನಮ್ಮ ಮೈದಾನ, ನಮ್ಮದೇ ಜಯ: ಸಿಎಸ್ಕೆ ಮಣಿಸಿ ಬೀಗಿದ ಆರ್ಸಿಬಿ
ಐ.ಎಸ್.ಪಿ.ಎಲ್ ಆಖಾಡಕ್ಕೆ ಮಹ್ಮದ್: ಬಸವನಬಾಗೇವಾಡಿ ಗ್ರಾಮೀಣ ಪ್ರತಿಭೆ