
ನವದೆಹಲಿ: ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ಭಾಗಗಳಲ್ಲಿ ನಾಳೆಯವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮುಂಬರುವ ಎರಡು ಮೂರು ದಿನಗಳಲ್ಲಿ ಮಹಾರಾಷ್ಟ್ರದ ಮರಾಠವಾಡ, ವಿದರ್ಭ ಹಾಗೂ ಛತ್ತೀಸ್‌ಗಢದ ಹಲವು ಭಾಗಗಳಿಂದ ನೈಋತ್ಯ ಮುಂಗಾರು ಮತ್ತಷ್ಟು ಹಿಂದಕ್ಕೆ ಸರಿಯಲು (ಹಿಂಗಾರು ಆರಂಭಕ್ಕೆ) ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಾಖಂಡ, ತೆಲಂಗಾಣ, ಹಿಮಾಲಯ ತಪ್ಪಲಿನ ಪಶ್ಚಿಮ ಬಂಗಾಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರಿಯಲಿದೆ. ಇದೇ ರೀತಿಯ ಹವಾಮಾನ ಪರಿಸ್ಥಿತಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರ ರಾಜ್ಯಗಳಲ್ಲೂ ಕಂಡುಬರಲಿದೆ. ಇದೇ ವೇಳೆ ಆಂಧ್ರಪ್ರದೇಶ ಕರಾವಳಿ ಮತ್ತು ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.


More Stories
ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ಶಕ್ತಿಯ ಕೇಂದ್ರ: ಕೊಪ್ಪಳ ಗವಿಶ್ರೀಗಳು
ಕೆಲಸದವಳು “ಅಮ್ಮಾ ನಾಳೆ ಬರಲ್ಲ”: ಒಂದೇ ಮಾತಿಗೆ ತಲೆಕೆಳಗಾಯ್ತು ಇಡೀ ಸಂಸಾರ! : ನಂದಿನಿ ಸನಬಾಳ
ದಕ್ಷಿಣದಲ್ಲಿ ಮೂರೇ ಚಿತ್ರ: ನಾನಾ ಪಟೇಕರ್