October 12, 2026

Hampi times

Kannada News Portal from Vijayanagara

ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ

ಹೊಸಪೇಟೆ : ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಹಾಗೂ ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ಯುವ ದಸರಾ 2026’ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿ ಅವರು ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.

ಶಿವಮೊಗ್ಗದಲ್ಲಿ ಭಾನುವಾರ (ಅ. 11) ನಡೆದ ಈ ಪ್ರತಿಷ್ಠಿತ ಸ್ಪರ್ಧೆಯ 90 ಕೆ.ಜಿ ಮತ್ತು ಅದಕ್ಕೂ ಹೆಚ್ಚಿನ ತೂಕದ ವಿಭಾಗದಲ್ಲಿ ಕಣಕ್ಕಿಳಿದಿದ್ದ ಶ್ರೀವರ್ಧನ್ ರೆಡ್ಡಿ, ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹೊಸಪೇಟೆ ನಿವಾಸಿಯಾದ ಶ್ರೀವರ್ಧನ್ ರೆಡ್ಡಿ  ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹೊಸಪೇಟೆಯ ಜೆಸಿ ಶಾಲೆ ಹಾಗೂ ಟಿಎಂಎಇ ಡಿಎವಿ ಶಾಲೆಯಲ್ಲಿ ಮುಗಿಸಿದ್ದು, ಸುರಭಿ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಅವರು ಹುಬ್ಬಳ್ಳಿಯಲ್ಲಿ ಬಿಬಿಎ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ರಾಜ್ಯ ಮಟ್ಟದ ವೇದಿಕೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಜಯನಗರ ಜಿಲ್ಲೆ ಹಾಗೂ ಹೊಸಪೇಟೆ ನಗರದ ಕೀರ್ತಿಯನ್ನು ಹೆಚ್ಚಿಸಿದ ಇವರ ಸಾಧನೆಗೆ ಕ್ರೀಡಾಭಿಮಾನಿಗಳು, ಸ್ನೇಹಿತರು ಮತ್ತು ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Please follow and like us: