October 23, 2026

Hampi times

Kannada News Portal from Vijayanagara

ಅ.21 ಬನ್ನಿ ಮುಡಿಯುವ ಉತ್ಸವ, ಪೇಟೆ ಬಸವೇಶ್ವರ ಉತ್ಸವ ಮೂರ್ತಿ ಮೆರವಣಿಗೆ: ಗೊಗ್ಗ ಚನ್ನಬಸವರಾಜ

  • ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬನ್ನಿ

  • ಸಂಜೆ 4ಕ್ಕೆ ಭವ್ಯ ಮೆರವಣಿಗೆ

ಹೊಸಪೇಟೆ: ನಗರದ ಮೇನ್ ಬಜಾರ್‌ನಲ್ಲಿರುವ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನದಿಂದ ಶ್ರೀ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದವರೆಗೆ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಹಾಗೂ ಸಾಂಪ್ರದಾಯಿಕ ಬನ್ನಿ ಮುಡಿಯುವ ಧಾರ್ಮಿಕ ಕಾರ್ಯಕ್ರಮವು ಅಕ್ಟೋಬರ್ 21ರ ಬುಧವಾರ ಸಂಜೆ ಜರುಗಲಿದೆ ಎಂದು ಹೊಸಪೇಟೆ ನಗರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ ತಿಳಿಸಿದ್ದಾರೆ.

ಹೊಸಪೇಟೆ ನಗರ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಆಯೋಜಿಸಲಾಗಿರುವ ಈ ಧಾರ್ಮಿಕ ಕಾರ್ಯಕ್ರಮವು ಬುಧವಾರ ಸಂಜೆ 4:00 ಗಂಟೆಗೆ ಸರಿಯಾಗಿ ಮೇನ್ ಬಜಾರ್‌ನ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನದಿಂದ ಆರಂಭವಾಗಲಿದೆ. ಅಲ್ಲಿಂದ ಉತ್ಸವ ಮೂರ್ತಿಯನ್ನು ಸಕಲ ಮಂಗಳವಾದ್ಯಗಳೊಂದಿಗೆ ಭವ್ಯ ಮೆರವಣಿಗೆಯ ಮುಖಾಂತರ ಶ್ರೀ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೊಂಡೊಯ್ದು, ವಿಧ್ಯುಕ್ತವಾಗಿ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ.

ಈ ಪವಿತ್ರ ಧಾರ್ಮಿಕ ಮಹೋತ್ಸವದಲ್ಲಿ ಹೊಸಪೇಟೆ ನಗರ ಸೇರಿದಂತೆ ಸುತ್ತಮುತ್ತಲಿನ ವೀರಶೈವ ಲಿಂಗಾಯತ ಸಮಾಜ ಬಾಂಧವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಾಜದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ನೀಲಕಂಠಗೌಡ್ರು ಕೋರಿದ್ದಾರೆ.

Please follow and like us: