May 5, 2026

Hampi times

Kannada News Portal from Vijayanagara

Blog

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್‌ ಕೊಟ್ಟೂರು

ತಾಲ್ಲೂಕಿನ ಕಾಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ರಹಿತ ಗ್ರಾಮಸ್ಥರು ತಮಗೆ ತಕ್ಷಣವೇ ನಿವೇಶನಗಳನ್ನು ನೀಡುವಂತೆ ಆಗ್ರಹಿಸಿ ಮಂಗಳವಾರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಡಾ. ಕೆ. ಕೊಟ್ರೇಶ್ ಅವರ ಮೂಲಕ ರಾಜ್ಯ ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿದರು.

 

ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಜಿಲ್ಲಾಧ್ಯಕ್ಷ ಕೆ. ಕೊಟ್ರೇಶ್ ಹಾಗೂ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್. ಎಂ. ಸಂತೋಷ್ ಮಾತನಾಡಿ, ಗ್ರಾಮದ ಅನೇಕ ಬಡ ಕುಟುಂಬಗಳು ಹಲವು ವರ್ಷಗಳಿಂದ ಸ್ವಂತ ಮನೆಯಿಲ್ಲದೆ ಅಪಾಯಕಾರಿ ಸ್ಥಿತಿಯಲ್ಲಿ ವಾಸಿಸುತ್ತಿವೆ. ಸರ್ಕಾರದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಈವರೆಗೆ ಇವರಿಗೆ ಯಾವುದೇ ಪ್ರಯೋಜನ ಲಭಿಸಿಲ್ಲ. ಈ ಹಿಂದೆ ಹಲವು ಬಾರಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆತಿಲ್ಲ. ರಾಜ್ಯದಲ್ಲಿ ಅಂದಾಜು 37 ಲಕ್ಷ ಜನರು ವಸತಿ ರಹಿತರಿದ್ದಾರೆ ಎಂಬ ವರದಿಗಳಿದ್ದರೂ, ಅರ್ಹರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಕಾಳಾಪುರ ಗ್ರಾಮ ಪಂಚಾಯಿತಿಯಲ್ಲಿ ಕೇವಲ ಒಂದು ಭಾಗಕ್ಕೆ ಸೀಮಿತವಾಗದೆ, ಎಲ್ಲ ಅರ್ಹ ವಸತಿ ರಹಿತರಿಗೂ ಸಮಾನವಾಗಿ ನಿವೇಶನ ಹಂಚಿಕೆ ಮಾಡಬೇಕು. ಶಾಸಕರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಬಡವರಿಗೆ ನ್ಯಾಯ ಒದಗಿಸಬೇಕು ಎಂದು  ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕೆ. ರೇಣುಕಮ್ಮ, ಟಿ. ಕೊಟ್ರೇಶ್, ದುರುಗಮ್ಮ, ರೇಣುಕಮ್ಮ, ಗೌರಮ್ಮ, ಲಕ್ಷ್ಮಮ್ಮ ಸೇರಿದಂತೆ ಗ್ರಾಮದ ವಸತಿ ರಹಿತರು ಪಾಲ್ಗೊಂಡಿದ್ದರು.

 

 

 

 

 

Translate »
[t4b-ticker]
error: Content is protected !!